ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆ.ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮೇ 14ರವರೆಗೆ ಇಲ್ಲಿನ ಕೋರ್ಟ್‌ ವಿಸ್ತರಿಸಿದೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಕಾರಣ ಕವಿತಾ ಅವರನ್ನು ಮಂಗಳವಾರ ಕೋರ್ಟ್‌ ಎದುರು ಹಾಜರುಪಡಿಸಲಾಗಿತ್ತು.ಸಿಬಿಐ, ಇ.ಡಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತಿರಿಸಿ ಆದೇಶ ಹೊರಡಿಸಿದರು.

ವಿಚಾರಣೆ ವೇಳೆ ಇ.ಡಿ, ‘ತನಿಖೆಯು ಪ್ರಮುಖ ಹಂತದಲ್ಲಿದೆ. ಒಂದು ವಾರದ ಒಳಗಾಗಿ ಕವಿತಾ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಬಹುದು’ ಎಂದು ತಿಳಿಸಿತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!