ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ. ಕವಿತಾ ಮತ್ತು ಇತರರ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಬಂಧನವನ್ನು ವಿಸ್ತರಿಸಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಈ ಪ್ರಕರಣದಲ್ಲಿ ಜಾಮೀನು ಬಾಂಡ್ ಸಲ್ಲಿಸದ ಕಾರಣ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಆಪಾದಿತ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

2018ರಲ್ಲಿ ಯೂಟ್ಯೂಬರ್ ಧ್ರುವ ರಥೀ ಅವರು ಪ್ರಸಾರ ಮಾಡಿದ ಅವಹೇಳನಕಾರಿ ವೀಡಿಯೊವನ್ನು ಮರುಟ್ವೀಟ್ ಮಾಡಿದ್ದಕ್ಕಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾದ ಸಮನ್ಸ್ ಅನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ 6 ವಾರಗಳ ಕಾಲ ಮುಂದೂಡಿದೆ.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!