ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ.
ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಇಡಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿ ರೂಸ್ ಅವೆನ್ಯೂ ಕೋರ್ಟ್ ವಜಾಗೊಳಿಸಿದೆ.
ಸಿಬಿಐ ಮತ್ತು ಇಡಿ ದಾಖಲಿಸಿರುವ ಪ್ರಕರಣಗಳಲ್ಲಿ ಸಿಸೋಡಿಯಾ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾರ್ಚ್ 31 ರಂದು ಸಿಬಿಐ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶರು ಅವರಿಗೆ ಜಾಮೀನು ನಿರಾಕರಿಸಿದರು. ಈ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿ ದೆಹಲಿ ಹೈಕೋರ್ಟ್ನಲ್ಲಿ ಬಾಕಿ ಇದೆ.