ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.
ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಬೆಂಗಳೂರಿನ 35ನೇ ಸಿಸಿಹೆಚ್ ಮುಂದೆ ಇಡಿ ಮನವಿ ಮಾಡಿತ್ತು.
ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು.
ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಾಂತರ ರೂ. ನಗದು ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್ಗಳ ವ್ಯವಹಾರ ನಡೆದಿದೆ. ಕೋಟ್ಯಾಂತರ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು.
ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.