ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್‌ ರಾವುತ್ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನುಮುಂಬೈ ವಿಶೇಷ ನ್ಯಾಯಾಲಯ ಸೋಮವಾರ ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿದೆ.

ಗೋರೆಗಾಂವ್‌ನ ಉಪನಗರದಲ್ಲಿರುವ ಪತ್ರಾ ಚಾಳ್ (ವಠಾರ) ಮರುಅಭಿವೃದ್ಧಿಯಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ 60 ವರ್ಷದ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ಇಡಿ ಕಸ್ಟಡಿಯಲ್ಲಿದ್ದ ರಾವುತ್ ಅವರನ್ನು ಆಗಸ್ಟ್ 8 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ (ಆಗಸ್ಟ್ 22ರವರೆಗೆ) ಕಳುಹಿಸಲಾಗಿತ್ತು. ಈಗ ಮತ್ತೆ ಸೋಮವಾರ ಪ್ರಕರಣದ ವಿಚಾರಣೆ ನಡೆದಿದ್ದು, ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಆದೇಶಿಸಿದರು.

ಪತ್ರಾ ಚಾಳ್​​ನ ಮರುಅಭಿವೃದ್ಧಿಯಲ್ಲಿ ನಡೆದಿವೆ ಎನ್ನಲಾದ ಹಣಕಾಸು ಅಕ್ರಮಗಳು, ರಾವುತ್ ಅವರ ಪತ್ನಿ ಮತ್ತು ಸಹಚರರನ್ನು ಒಳಗೊಂಡಿರುವ ಹಣಕಾಸಿನ ವಹಿವಾಟುಗಳ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!