Friday, March 1, 2024

ಅಕ್ರಮ ಹಣ ವರ್ಗಾವಣೆ ಪ್ರಕರಣ: ಲಾಲು ಪ್ರಸಾದ್ ಯಾದವ್, ತೇಜಸ್ವಿ ಯಾದವ್ ಗೆ ಸಮನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಪುತ್ರ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್ ನೀಡಿದೆ .

ಫೆಡರಲ್ ತನಿಖಾ ಸಂಸ್ಥೆ ತನ್ನ ಪಾಟ್ನಾ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನನ್ನು ಕೇಳಿದೆ .
ಲಾಲು ಪ್ರಸಾದ್ ಅವರನ್ನು ಜನವರಿ 29 ರಂದು ಹಾಜರಾಗಲು ಹಾಗೂ ಮರುದಿನ ಜನವರಿ 30 ರಂದು ತೇಜಸ್ವಿ ಅವರಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

ಲಾಲು ಪ್ರಸಾದ್ ಮತ್ತು ತೇಜಸ್ವಿ ಯಾದವ್ ಅವರು ಈ ಹಿಂದೆ ತನಿಖಾ ಸಂಸ್ಥೆ ಹೊರಡಿಸಿದ ಸಮನ್ಸ್ ನಿಂದ ತಪ್ಪಿಸಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!