ದಿಗಂತ ವರದಿ ಚಿತ್ರದುರ್ಗ:
ಹಣದ ವ್ಯವಹಾರಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಯಾದವರನ್ನು ನಗರದ ಹೊರಪೇಟೆಯ ನಿಬಾಸಿ ಹಜರ್ (30) ಎಂದು ಗುರುತಿಸಲಾಗಿದೆ. ಮುಬಾರಕ್, ಪ್ರದೀಪ್, ಬಾಬು ಹತ್ಯೆ ಮಾಡಿದ ಆರೋಪಿಗಳು ಎನ್ನಲಾಗಿದೆ. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಳಿ ಘಟನೆ ನಡೆದಿದ್ದು, ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ನಗರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.