ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ ಸೋಲಾಗಿದೆ. ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್ನಲ್ಲಿ ಹಣ ಬಂದಿದೆ ಎಂದು ಕಾಂಗ್ರೆಸ್ ಎಂಎಲ್ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು. ನಾವು ಕೂಡ ಅವರಿಗಿಂತ ಹೆಚ್ಚು ಪೈಪೋಟಿ ನೀಡಿದ್ದೇವೆ. ನಾವೇನು ಖಾವಿ ತೊಟ್ಟ ಸನ್ಯಾಸಿಗಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.