ಹಣ ಅಕ್ರಮ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಒಂದು ವಾರಗಳ ಕಾಲ ಮುಂದೂಡಿದೆ.
ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು, ಜಾರಿ ನಿರ್ದೇಶನಾಲಯದಿಂದ ಚಾರ್ಜ್ ಶೀಟ್ ಮತ್ತು ಇತರ ದಾಖಲೆಗಳ ಸಂಪೂರ್ಣ ಪ್ರತಿಗಳನ್ನು ಇನ್ನೂ ಸ್ವೀಕರಿಸಿಲ್ಲ ಹೀಗಾಗಿ ಪ್ರಕರಣವನ್ನು ಡಿಸೆಂಬರ್ 20ಕ್ಕೆ ಮುಂದೂಡಿದರು.
ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನವೆಂಬರ್ 15 ರಂದು ನ್ಯಾಯಾಲಯವು ನಟಿಗೆ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ಆಕೆಯನ್ನು ಈವರೆಗೆ ಬಂಧಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!