ಹಣ ಅಕ್ರಮ ವರ್ಗಾವಣೆ ಪ್ರಕರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಗೆ ಸಮನ್ಸ್‌ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬಕಾರಿ ನೀತಿ ಹಗರಣದ ಜೊತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಮತ್ತೆ ಸಮನ್ಸ್‌ ಜಾರಿ ಮಾಡಿದೆ

ಜನವರಿ 3ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ‌ದೆ .

ನವೆಂಬರ್‌ 2 ರಂದು ಮತ್ತು ಡಿಸೆಂಬರ್‌ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಈ ಹಿಂದೆ ಇ.ಡಿ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ನೀಡಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಮೂಲಗಳು ಶುಕ್ರವಾರ ಹೇಳಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!