ಆ.27ರಂದು ಮಹಿಳೆಯರ ಖಾತೆಗೆ ಹಣ ವರ್ಗಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಆಗಸ್ಟ್‌ 27,2023ರಂದು ವರ್ಗಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಅವರು,ಭಾರತ ಇಂದು ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಕಂಡಿದೆ. ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿಗಳು ಜಾರಿ ಮಾಡಿದ್ದೇವೆ. ಆ.27ರಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ಸಾವಿರ ಹಣ ಹಾಕುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!