ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಹಣ ಹಂಚಿಕೆ ಮಾಡದೆ ಇದ್ದಿದ್ದರೆ ನನ್ನ ಗೆಲುವು ಆಗುತ್ತಿತ್ತು. ಧರ್ಮದ ಮುಂದೆ ಅಧರ್ಮ ಗೆದ್ದಿದೆ. ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಸೋಲನ್ನು ಒಪ್ಪಿಕೊಂಡು ಸೋಲನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಹಣಬಲದಿಂದ ಗೆದ್ದಿದೆ. ಮುಸ್ಲಿಂ ಮತ್ತು ಕುರುಬ ಸಮುದಾಯದವರು ವಾಸಿಸುವ ಪ್ರದೇಶಗಳಲ್ಲಿ ಮತ ಬರಲಿಲ್ಲ. ಚುನಾವಣೆ ವೇಳೆ ಭಾಗ್ಯಲಕ್ಷ್ಮಿ ಹಣ ಹೂಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸೋಲಿಗೆ ನಾನೇ ಹೊಣೆಯಾಗುತ್ತೇನೆ ಎಂದು ಹೇಳಿದರು.
ಚುನಾವಣೆ ನಡೆಸಲು ಸಹಕರಿಸಿದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಚಿವ ಶಿವರಾಜ್ ತಂಗಡಗಿ ಬಂದು ಹಣ ಹಂಚಿದ್ದಾರೆ. ಸಿಎಂ ಬಂದಿರೋದು ಹಣ ಹಂಚಿರೋದು ನನ್ನ ಸೋಲಿಗೆ ಮುಳುವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.