ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಉತ್ತರಪ್ರದೇಶದ ಸ್ಥಳೀಯ ಬಿಜೆಪಿ ನಾಯಕ ಅನಿಲ್ ಕುಮಾರ್ ಚೌಹಾಣ್ ಅವರ ಪತ್ನಿ ಮಂಗಗಳ ಕಾಟದಿಂದ ತಪ್ಪಿಸಿಕೊಳ್ಳಲು ಮಹಡಿ ಮೇಲಿಂದ ಹಾರಿ ಪ್ರಾಣಬಿಟ್ಟಿದ್ದಾರೆ.
ಸುಷ್ಮಾ ದೇವಿ(50) ಮಹಡಿ ಮೇಲೆ ತೆರಳಿದ್ದು, ಮಂಗಗಳು ಗುಂಪು ಬಂದಿದೆ. ಇವುಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಮಹಡಿ ಮೇಲಿಂದ ಹಾರಿದ್ದಾರೆ. ಗಾಯಗೊಂಡಿದ್ದ ಸುಷ್ಮಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಬರುವ ಮುನ್ನವೇ ಸುಷ್ಮಾ ಅವರು ಕೊನೆಯುಸಿರೆಳೆದಿದ್ದಾರೆ.