ಹೊಸದಿಗಂತ ಡಿಜಿಟಲ್ ಡೆಸ್ಕ್;
ರಾಜ್ಯದಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟಿಸುತ್ತಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಇಂದು ಒಂದೇ ದಿನ ನಾಲ್ವರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಎನ್ ಆರ್ ಪುರ ವ್ಯಾಪ್ತಿಯಲ್ಲಿ ಇಂದು ನಾಲ್ವರಿಗೆ ಮಂಗನಕಾಯಿಲೆ ದೃಢಪಟ್ಟಿರುವುದಾಗಿ ತಿಳಿಸಿದೆ.
ಮಂಗನಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು, ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮಂಗನಕಾಯಿಲೆಗೆ ಒಳಗಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.