ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನಲ್ಲಿ ಮತ್ತಿಬ್ಬರಲ್ಲಿ ಮಂಗನಕಾಯಿಲೆ ರೋಗ ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಆರಕ್ಕೆ ಏರಕೆಯಾಗಿದೆ. ಎನ್ಆರ್ ಪುರ ತಾಲೂಕಿನ ಮೂವರಲ್ಲಿ, ಕೊಪ್ಪ ತಾಲೂಕಿನ ಇಬ್ಬರಲ್ಲಿ ಮತ್ತು ಚಿಕ್ಕಮಗಳೂರು ತಾಲೂಕಿನ ಓರ್ವನಲ್ಲಿ ಮಂಗನಕಾಯಿಲೆ ರೋಗ ಕಾಣಿಸಿಕೊಂಡಿದೆ.
ಮಂಗನಕಾಯಿಲೆ ಚಿಕಿತ್ಸೆಗೆಂದು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಕೆಎಫ್ಡಿ ವಾರ್ಡ್ ತೆರೆದಿದೆ. ಆರೋಗ್ಯ ಇಲಾಖೆಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ಗ್ರಾಮಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಜೊತೆಗೆ, ಆರೋಗ್ಯ ಇಲಾಖೆ ಸಿಬ್ಬಂದಿ ಮಂಗನ ಕಾಯಿಲೆ ಸೋಂಕು ಲಕ್ಷಣ ಕಂಡುಬಂದವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್ ರವಾನಿಸಿದ್ದಾರೆ.