ರಾಜ್ಯದಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಬಣ: ಇಂದು 13 ಜನರಿಗೆ ಸೋಂಕು ದೃಢ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಇಂದು ಒಂದೇ ದಿನ ಬರೋಬ್ಬರಿ 13 ಜನರಿಗೆ ಸೋಂಕು ದೃಢಪಟ್ಟಿದೆ.

ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 63 ಜನರನ್ನು ಮಂಗನ ಕಾಯಿಲೆ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.13 ಜನರಿಗೆ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದೆ.

ಶಿವಮೊಗ್ಗದಲ್ಲಿ 42 ಮಂದಿಯನ್ನು ಕಳೆದ 24 ಗಂಟೆಯಲ್ಲಿ ಮಂಗನ ಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 6 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಚಿಕ್ಕಮಗಳೂರಲ್ಲಿ 21 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು 7 ಮಂದಿಗೆ ದೃಢಪಟ್ಟಿದೆ ಎಂದು ತಿಳಿಸಿದೆ.

ಇದುವರೆಗೆ 3220 ಮಂದಿಯನ್ನು ಮಂಗನ ಖಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, 89 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರಲ್ಲಿ 63 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ 24 ಸಕ್ರೀಯ ಪ್ರಕರಣಗಳು ಇದ್ದಾವೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!