ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದ್ದು, ಚಿಕ್ಕಮಗಳೂರಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65) ಮೃತ ದುರ್ದೈವಿ.
ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢವಾಗಿದೆ. ಹೀಗಾಗಿ, ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರದಿದೆ.