ಮಂಕಿ ಪಾಕ್ಸ್ ಆರ್ಭಟ: ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಕಿ ಪಾಕ್ಸ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯೂಯಾರ್ಕ್ ನಗರದಲ್ಲಿ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

ಅಂಕಿ ಅಂಶಗಳ ಪ್ರಕಾರ ನ್ಯೂಯಾರ್ಕ್ ರಾಜ್ಯದಲ್ಲಿ ಇದುವರೆಗೆ ಬರೋಬ್ಬರಿ 1,383 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ನ್ಯೂಯಾರ್ಕ್ ನಗರ ನಂಬರ್ ಒನ್ ಸ್ಥಾನದಲ್ಲಿದೆ. ಮಾಹಿತಿಗಳ ಪ್ರಕಾರ ಈಗಾಗಲೇ 150,000 ಮಂದಿ ಈ ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಅನಿವಾರ್ಯ ಎಂದು ಮೇಯರ್ ಎರಿಕ್ ಆಡಮ್ಸ್, ನಗರ ಆರೋಗ್ಯ ಆಯುಕ್ತ ಅಶ್ವಿನ್ ವಾಸನ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ವಿಪತ್ತು ತುರ್ತು ಪರಿಸ್ಥಿತಿಯನ್ನು ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೊಚುಲ್ ಅವರು ಕಳೆದ ಒಂದು ದಿನದ ಹಿಂದಷ್ಟೇ ಘೋಷಿಸಿದ್ದರು. ಇದರ ಬೆನ್ನಿಗೇ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!