ವಿದೇಶೀ ಪ್ರಯಾಣ ಇತಿಹಾಸ ಇಲ್ಲದ ವ್ಯಕ್ತಿಗೆ ಕಾಣಿಸಿಕೊಂಡ ಮಂಕಿಫಾಕ್ಸ್:‌ ದೇಶದಲ್ಲಿ 4ನೇ ಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಯಾವುದೇ ವಿದೇಶೀ ಪ್ರಯಾಣದ ಇತಿಹಾಸ ಹೊಂದಿಲ್ಲದ ವ್ಯಕ್ತಿಯೊಬ್ಬನಿಗೆ ಮಂಕೀಫಾಕ್ಸ್‌ ದೃಢಪಟ್ಟಿರುವ ಕುರಿತು ಮೂಲಗಳು ವರದಿ ಮಾಡಿವೆ. ರಾಷ್ಟ್ರ ರಾಜಧಾನಿ ದೆಹಲಿಯ 34 ವರ್ಷದ ವ್ಯಕ್ತಿಯೊಬ್ಬನಲ್ಲಿ ಮಂಕೀ ಫಾಕ್ಸ್‌ ಸೊಂಕು ಕಾಣಿಸಿಕೊಂಡಿದೆ. ಇದು ಭಾರತದಲ್ಲಿ ವರದಿಯಾದ ನಾಲ್ಕನೇ ಮಂಕೀಫಾಕ್ಸ್ ಪ್ರಕರಣವಾಗಿದೆ

ಈ ವ್ಯಕ್ತಿ ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಸ್ಟಾಗ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಶ್ಚಿಮ ದೆಹಲಿಯ ನಿವಾಸಿಯಾಗಿರುವ ವ್ಯಕ್ತಿಯಲ್ಲಿ ಮೂರು ದಿನಗಳ ಹಿಂದೆ ಮಂಕಿಪಾಕ್ಸ್ ರೋಗಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇಲ್ಲಿನ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್‌ಐವಿ) ಶನಿವಾರ ಕಳುಹಿಸಲಾಗಿದ್ದು, ಅದು ಧನಾತ್ಮಕವಾಗಿ ಬಂದಿದೆ ಎಂದು ಮೂಲಗಳು ತಿಳಿಸಿವೆ. ಸಂಪರ್ಕ ಪತ್ತೆಹಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

ಈ ಹಿಂದೆ ಕೇರಳದಲ್ಲಿ ಮೂರು ಮಂಕಿಫಾಕ್ಸ್ ಪ್ರಕರಣಗಳು ವರದಿಯಾಗಿದ್ದವು. WHO ಶನಿವಾರ ಮಂಕಿಪಾಕ್ಸ್ ಅನ್ನು ಅಂತರರಾಷ್ಟ್ರೀಯ ಕಾಳಜಿಯ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ. ಮಂಕಿಪಾಕ್ಸ್ ವೈರಸ್ ಸೋಂಕಿತ ಪ್ರಾಣಿಗಳಿಂದ ಮನುಷ್ಯರಿಗೆ ಪರೋಕ್ಷ ಅಥವಾ ನೇರ ಸಂಪರ್ಕದ ಮೂಲಕ ಹರಡುತ್ತದೆ.‌ ಜಗತ್ತಿನಾದ್ಯಂತ 75 ಕ್ಕೂ ಹೆಚ್ಚು ದೇಶಗಳಲ್ಲಿ ವೈರಸ್‌ ಹರಡಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!