ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ವಿಮಾನ ನಿಲ್ದಾಣದ ಮೂಲಕ ತೆರಳಿದ್ದ ಕೇರಳ ಯುವಕನಲ್ಲಿ ಮಂಕಿಪಾಕ್ಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಿಗಾ ಹೆಚ್ಚಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ 10 ಹಾಸಿಗೆಗಳ ವಿಶೇಷ ವಾರ್ಡ್ ಮೀಸಲಿಡಲಾಗಿದೆ ಎಮದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಜೊತೆಗೆ ವಿಮಾನದ ಮೂಲಕ ಆಗಮಿಸುವ ಎಲ್ಲರ ಮೇಲೂ ಆರೋಗ್ಯ ಇಲಾಖೆ ಕಣ್ಗಾವಲಿರಿಸಲಿದ್ದು, ಆರೋಗ್ಯ ತಪಾಸಣೆಗೆ ಒಳಪಡಿಸಲಿದೆ. ಜ್ವರ ಸಂಬಂದಿ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣವೇ ಮಾದರಿ ಸಂಗ್ರಹಿಸಿ ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ