ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಮಂಕಿಪಾಕ್ಸ್: ದೆಹಲಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಸೋಂಕು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಮಂಕಿಪಾಕ್ಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ.ಈ ಮೂಲಕ ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲಿ ಇದು ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದ್ದು, ದೆಹಲಿಯಲ್ಲಿ ವಾಸವಾಗಿರುವ ನೈಜಿರಿಯನ್ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ.
ಕೇರಳದಲ್ಲಿ ಇಂದು ಬೆಳಿಗ್ಗೆ 5ನೇ ಕೇಸ್ ಪತ್ತೆಯಾಗಿದ್ದು, ಯುಎಇಯಿಂದ ಆಗಮಿಸಿದ್ದ 30 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಈ ಪ್ರಕರಣದ ಬೆನ್ನಲ್ಲೇ ಇದೀಗ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!