ಮಂಕಿಪಾಕ್ಸ್‌ಗೆ ಮಧ್ಯವಯಸ್ಕರೇ ಟಾರ್ಗೆಟ್: ಸೋಂಕಿತ ಪ್ರತೀ ಐವರಲ್ಲಿ ಮೂವರು ‘ಗೇ’!?

ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಕಿಪಾಕ್ಸ್ ಕುರಿತಾಗಿ ವಿಶ್ವ ಆರೋಗ್ಯ ಸಂಸ್ಥೆ ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ್ದು, ಈ ಖಾಯಿಲೆ ಕಾಣಿಸಿಕೊಂಡ ಪ್ರತಿ ಐವರಲ್ಲಿ ಮೂವರು, ಪುರುಷ ಮತ್ತು ಪುರುಷ ಲೈಂಗಿಕ ಸಂಪರ್ಕ ಮಾಡಿರುವವರು ಎಂದು ಹೇಳಿದೆ.
ಜಾಗತಿಕವಾಗಿ 50 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹಬ್ಬುತ್ತಿದ್ದು, ಈ ವರ್ಷ 3200 ಕ್ಕಿಂತ ಅಧಿಕ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ. ಕಾಯಿಲೆಗೆ ಒಂದು ಜೀವ ಬಲಿಯಾಗಿದೆ ಎಂದು ಡಬ್ಲ್ಯುಎಚ್‌ಒ ಹೇಳಿದೆ.
ಡಬ್ಲ್ಯುಎಚ್‌ಒ ವರದಿಗಳ ಪ್ರಕಾರ ಬಹುತೇಕ ಮಧ್ಯ ವಯಸ್ಕರಲ್ಲಿಯೇ ಈ ಕಾಯಿಲೆ ಕಂಡುಬರುತ್ತಿದೆ. ಜೊತೆಗೆ ಇವರಲ್ಲಿ ಬಹುತೇಕರು ಪುರುಷರೇ ಆಗಿದ್ದಾರೆ.
ಪಶ್ಚಿಮ, ಮಧ್ಯ ಆಫ್ರಿಕಾ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಮಂಕಿಪಾಕ್ಸ್, ಮೇ ತಿಂಗಳಿನಿಂದ ಇತರ ದೇಶಗಳಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಹೆಚ್ಚಾಗಿ ಪಶ್ಚಿಮ ಯುರೋಪ್‌ನಲ್ಲಿ ಸೋಂಕು ಪತ್ತೆಯಾಗುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!