ರಾಜ್ಯಕ್ಕೆ ಮಂಕಿಪಾಕ್ಸ್ ಭೀತಿ: ಸರ್ಕಾರದಿಂದ ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಓರ್ವ ಸಾವನ್ನಪ್ಪಿದ್ದ ಬೆನ್ನಲ್ಲೇ ಎಚ್ಛೆತ್ತುಗೊಂಡ ಕರ್ನಾಟಕ ಸರ್ಕಾರ, ಸೋಂಕಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಮಂಕಿಪಾಕ್ಸ್ ಸರ್ವೇಕ್ಷಣೆಗಾಗಿ ಹೆಚ್ಚಿನ ಮಟ್ಟದ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲು ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಕೂಡಲೇ ಕೈಗೊಂಡಿರುವುದನ್ನು ಖಚಿತ ಪಡಿಸಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

ಮಾರ್ಗಸೂಚಿ ಕ್ರಮ:

  • ಮಂಕಿಪಾಕ್ಸ್ ಪ್ರತಿಯೊಂದು ಪ್ರಕರಣವನ್ನು ವರದಿಯಾಡುವುದು
    ತ್ವರಿತ ಪ್ರಕ್ರಿಯಾತಂಡದ ವಿವರವಾದ ತನಿಖೆ, ಮಾದರಿ ಸಂಗ್ರಹ ಮತ್ತು ಐಹೆಚ್‌ಐಪಿ ಪೋರ್ಟಲ್ ನಲ್ಲಿ ವರದಿ ಮಾಡಿದ ನಂತ್ರ ವರದಿ ಮಾಡತಕ್ಕದ್ದು
  • ಪ್ರಕರಣ ವರದಿ ಮಾಡುವಪತ್ರವನ್ನು ಸಂಪೂರ್ಣ ಭರ್ತಿ ಮಾಡಲಾಗಿದೆ ಎಂಬುದನ್ನು ಖಾತರಿ ಪಡಿಸಿಕೊಳ್ಳುವುದು.
  • ಶಂಕಿತ ಹಾಗೂ ಖಚಿತಪಟ್ಟ ಪ್ರಕರಣಗಳಿಗಾಗಿ ನಿರ್ದಿಷ್ಟ ಸಾಂಸ್ಥಿಕ ಪ್ರತ್ಯೇಕತೆ ಸೌಲಭ್ಯವಿರುವುದನ್ನು ಖಚಿತ ಪಡಿಸಿಕೊಳ್ಳುವುದು.
  • ಎಲ್ಲಾ ಶಂಕಿತ ಪ್ರಕರಣಗಳ ಸಂಪರ್ಕಿತರ ಪತ್ತೆಯನ್ನು ಕಡ್ಡಾಯವಾಗಿ ಕೈಗೊಳ್ಳುವುದು.
  • ಸಂಪರ್ಕಿತರನ್ನು ಲಕ್ಷಣಗಳು, ಚಿನ್ಹೆಗಳು ಕಂಡು ಬರುವವೆ ಎಂದು 21 ದಿನಗಳವರೆಗೆ ಮೇಲ್ವಿಚಾರಣೆ ಮಾಡುವುದು.
  • ಮಂಕಿಪಾಕ್ಸ್ ನ ಲಕ್ಷಣಗಳು, ಚಿನ್ಹೆಗಳು ಕಂಡು ಬಂದರೇ, ಕೂಡಲೇ ಪರೀಕ್ಷೆಗೊಳಪಡಿಸುವುದು ಹಾಗೂ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಶಾಲೆಗೆ ಕಳುಹಿಸಿಕೊಡುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!