September 4, 2026
Friday, September 4, 2026
spot_img

ಕೈಯಲ್ಲಿದ್ದ ಹಣ್ಣಿಗಾಗಿ ಓಡಿಬಂದ ಮಂಗಗಳು, ಬೆಟ್ಟದಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೈಯಲ್ಲಿದ್ದ ಹಣ್ಣನ್ನು ನೋಡಿ ಕೋತಿಗಳು ಹತ್ತಿರ ಬಂದಿದ್ದು, ಅದಕ್ಕೆ ಹೆದರಿ ಮಹಿಳೆಯೊಬ್ಬರು ಬೆಟ್ಟದಿಂದ ಬಿದ್ದು ಮೃತಪಟ್ಟಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ.

ತೂತುಕುಡಿಯ ದಕ್ಷಿಣ ತಿಟ್ಟಂಕುಳಂ ಪ್ರದೇಶದ ಅನಿತಾ ಮೃತರು. ಕಳೆದ ತಿಂಗಳಷ್ಟೇ 29 ವರ್ಷದ ಸುರೇಶ್ ಅವರನ್ನು ವಿವಾಹವಾಗಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿರುವ ಸುರೇಶ್ ಇತ್ತೀಚೆಗೆ ಮನೆಗೆ ಮರಳಿದ್ದರು. ದಂಪತಿ ಪೂಜೆ ಸಲ್ಲಿಸಲು ಕಜುಗುಮಲೈನಲ್ಲಿರುವ ಕಲುಗಸಲಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಪೂಜೆ ನಂತರ ಬೆಟ್ಟದ ತುದಿಯಲ್ಲಿರುವ ಉಚಿಪಿಳ್ಳಯಾರ್‌ ದೇಗುಲಕ್ಕೆ ಹೋಗಿದ್ದರು. ಈ ವೇಳೆ ದಂಪತಿ ಕೋತಿಗಳಿಗೆ ಹಣ್ಣು ನೀಡಲು ಮುಂದಾಗಿದ್ದಾರೆ. ಈ ವೇಳೆ, ಹಲವು ಕೋತಿಗಳು ಇದ್ದಕ್ಕಿದ್ದಂತೆ ಅವರನ್ನು ಸುತ್ತುವರಿದಿವೆ. ಕೋತಿಗಳಿಗೆ ಹೆದರಿ ಮಹಿಳೆ ಬೆಟ್ಟದ ತುದಿಯಿಂದ ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಕಜುಗುಮಲೈನ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ, ಪೊಲೀಸರೊಂದಿಗೆ ಸೇರಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !