ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ನಿಗದಿತ ಅವಧಿಗೂ ಮೊದಲೇ ಮುಂಗಾರು ಇಡೀ ದೇಶವನ್ನು ಆವರಿಸಿದ್ದು ರಾಜಸ್ತಾನ, ಪಂಜಾಬ್ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಸಹಜವಾಗಿ ಜುಲೈ 8ರ ವೇಳೆಗೆ ಮುಂಗಾರು ಇಡೀ ದೇಶವನ್ನು ವ್ಯಾಪಿಸಬೇಕಿತ್ತು. ಆರು ದಿನಗಳಿಗೂ ಮುಂಚಿತವಾಗಿಯೇ ಭಾನುವಾರದಂದು ಇಡೀ ದೇಶವನ್ನು ಆವರಿಸಿದೆ ಎಂದು ತಿಳಿಸಿದೆ.
ಜೂನ್‌ನಲ್ಲಿ 16 ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳು ಮಳೆ ಕೊರತೆ ಎದುರಿಸಿದ್ದವು. ಈ ತಿಂಗಳಿನಲ್ಲಿ ಸರಾಸರಿಗಿಂತಲೂ ಕಡಿಮೆ ಮಳೆ ಸುರಿದಿದ್ದರಿಂದ ಬಿತ್ತನೆಗೆ ಹಿನ್ನಡೆಯಾಗಿತ್ತು. ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡ್, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಅನ್ನದಾತರು ಸಂಕಷ್ಟಕ್ಕೆ ತುತ್ತಾಗಿದ್ದರು.