ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬ: ಜೂನ್ 1ರೊಳಗೆ ಪ್ರಾರಂಭವಾಗುವ ನಿರೀಕ್ಷೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇರಳದಲ್ಲಿ ಇಂದು ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆ ಹೊಂದಲಾಗಿತ್ತು. ಇದೀಗ ಕೇರಳಕ್ಕೆ ಮುಂಗಾರು ಆಗಮನದಲ್ಲಿ ವಿಳಂಬವಾಗಿದೆ. ಜೂನ್ 1ರೊಳಗೆ ಕೇರಳ ರಾಜ್ಯದಾದ್ಯಂತ ಮುಂಗಾರು ಆರಂಭ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್​ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಅದೇ ರೀತಿಯಾಗಿ ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ದೇಶದ ಆರ್ಥಿಕತೆ ಮೇಲೂ ಪಾತ್ರ ವಹಿಸುತ್ತದೆ. ಇನ್ನು, ಈ ಹಿಂದೆಯೇ ಮುಂಗಾರು ಪ್ರವೇಶದ ಬಗ್ಗೆ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ ಇದರಲ್ಲಿ 4 ದಿನಗಳ ವ್ಯತ್ಯಾಸವಾಗುವ ಸಾಧ್ಯತೆ ಇದೆ ಎಂದೂ ತಿಳಿಸಿತ್ತು.
ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಮೇ 16ಕ್ಕೆ ಅಂಡಮಾನ್ ಅ​ನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!