ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹವಾಮಾನ ಇಲಾಖೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಈಗಾಗಲೇ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬಹಿರಂಗಪಡಿಸಿದೆ.
ನೈಋತ್ಯ ಮಾನ್ಸೂನ್ ಮಾಲ್ಡೀವ್ಸ್, ಕೊಮೊರಿನ್ ಪ್ರದೇಶ, ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಗಳು ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಭಾಗಗಳನ್ನು ಭಾನುವಾರ(ಮೇ 19) ತಲುಪಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.ಇದರೊಂದಿಗೆ ಮೇ 31ರೊಳಗೆ ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆ ಇದೆ.
ಕಳೆದ ವರ್ಷ ಜೂನ್ 8ರಂದು ಕೇರಳಕ್ಕೆ ಮುಂಗಾರು ಆಗಮಿಸಿತ್ತು. 2022 ರಲ್ಲಿ ಮೇ 29, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ಮಾನ್ಸೂನ್ ಕೇರಳವನ್ನು ತಲುಪಿತ್ತು. ಭಾರತದ ಆರ್ಥಿಕತೆಯು ಕೃಷಿಯನ್ನು ಆಧರಿಸಿರುವುದರಿಂದ, ದೇಶದಲ್ಲಿ ಮಾನ್ಸೂನ್ ಆಧಾರದ ಮೇಲೆ ಬೆಳೆಗಳನ್ನು ಬೆಳೆಯಲಾಗುತ್ತದೆ.