ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಇದೀಗ ಕರ್ನಾಟಕಕ್ಕೂ ಮುಂಗಾರು ಮಳೆ ಪ್ರವೇಶದ ಮುನ್ಸೂಚನೆ ದೊರೆತಿದೆ. ಇಂದು ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿದ್ದರೇ, ಕೆಲವೆಡೆ ಮಳೆ ಕೂಡ ಆಗಿದೆ.
ಇನ್ನು ಮೂರು ಗಂಟೆಗಳಲ್ಲಿ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ,ಬೆಳಗಾವಿ,ಬಳ್ಳಾರಿ,ಬೀದರ್,ವಿಜಯಪುರ, ಚಿತ್ರದುರ್ಗ,ದಕ್ಷಿಣ ಕನ್ನಡ,ದಾವಣಗೆರೆ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ಮೈಸೂರು, ರಾಯಚೂರು, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.