ಮತ್ತಷ್ಟು ದುರ್ಬಲಗೊಂಡ ಮುಂಗಾರು: ಜೂ. 10ರ ನಂತರವೂ ಪ್ರಬಲಗೊಳ್ಳುವುದು ಅನುಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇತ್ತೀಚಿನ ಹವಾಮಾನ ಮುನ್ಸೂಚನೆಯಂತೆ ಮುಂಗಾರು ಮತ್ತಷ್ಟು ದುರ್ಬಲಗೊಂಡಿದೆ.
ಜೂನ್ 7ರ ಬಳಿಕ ಚುರುಕಾಗುವ ಲಕ್ಷಣ ತೋರಿಸಿದ್ದ ಮಾರುತಗಳು‌ ಈಗ ಜೂನ್ 10ರ ಬಳಿಕವೂ ಪ್ರಬಲಗೊಳ್ಳುವ ಸಾಧ್ಯತೆ ಇಲ್ಲ ಎಂಬ ಸೂಚನೆ‌ ನೀಡುತ್ತಿವೆ.

ಜೂ. 5ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕೊಡಗು, ಆಗುಂಬೆ, ಮಂಡ್ಯ, ಚಾಮರಾಜನಗರ, ರಾಮನಗರ, ಚೆನ್ನರಾಯಪಟ್ಗಣ, ಬೆಂಗಳೂರು ಭಾಗಗಳಲ್ಲಿ ಉತ್ತಮ ಮಳೆ, ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ರಾಜ್ಯದ ಇತರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!