ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಗಾಳಿ ಮಳೆಯ ಆರ್ಭಟಕ್ಕೆ ಮೆಸ್ಕಾಂ ವ್ಯಾಪ್ತಿಯಲ್ಲಿ ಇದುವರೆಗೆ 6,45,63,000 ರೂಪಾಯಿಗೂ ಅಧಿಕ ಮೊತ್ತದ ಆಸ್ತಿಗಳಿಗೆ ಹಾನಿಯಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಪ್ರಿಲ್ ತಿಂಗಳಿನಿಂದ ಜೂನ್ 15ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. 10,583 ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6,91,37,000 ರೂಪಾಯಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ 3,85,60,000 ಮೊತ್ತದ ಆಸ್ತಿಗಳಿಗೆ ಹಾನಿಯಾಗಿದೆ.
ಉಳಿದಂತೆ ಉಡುಪಿ ಜಿಲ್ಲೆಯಲ್ಲಿ 3,73,53,000 ಮತ್ತು ಶಿವಮೊಗ್ಗದಲ್ಲಿ 1,95,14,000 ರೂಪಾಯಿ ಮೊತ್ತದ ಮೆಸ್ಕಾಂ ಆಸ್ತಿಗಳು ಹಾನಿಗೊಳಗಾಗಿದೆ. ಹಾನಿಗೊಳಗಾದ ಬಹುತೇಕ ವಿದ್ಯುತ್ ಕಂಬಗಳು ಪರಿವರ್ತಕಗಳು ಹಾಗೂ ವಿದ್ಯುತ್ ಮಾರ್ಗಗಳನ್ನು ಬದಲಾಯಿಸಿ ವಿದ್ಯುತ್ ಪೂರೈಕೆ ಸುಗಮಗೊಳಿಸಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.