July 5, 2026
Sunday, July 5, 2026
spot_img

ಮತ್ತೆ ಚುರುಕಾದ ಮುಂಗಾರು: 5 ದಿನ ಭಾರೀ ಮಳೆ ಎಚ್ಚರಿಕೆ, ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್‌ನಲ್ಲಿ ದುರ್ಬಲವಾಗಿದ್ದ ಮುಂಗಾರು ಇದೀಗ ರಾಜ್ಯದಲ್ಲಿ ಮತ್ತೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಯೆಲ್ಲೋ, ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು ನಗರದಲ್ಲೂ ಮುಂದಿನ ಮೂರು ರಿಂದ ನಾಲ್ಕು ದಿನ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ಮುಂಗಾರು ಚುರುಕುಗೊಂಡಿರುವುದು ರೈತರಲ್ಲಿ ಆಶಾಭಾವನೆ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !