ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೈಸೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವದ್ವಯರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮೈಸೂರು :

ಮುಂಗಾರು ಹಂಗಾಮು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಯ ಪೂರ್ವ ಸಿದ್ಧತೆಗಳನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಬುಧವಾರ ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜವು ರೈತರಿಗೆ ಸರಿಯಾದ ಸಮಯದಲ್ಲಿ ದೊರೆಯಬೇಕು. ಯಾವ ರೈತರಿಗೂ ಬಿತ್ತನೆ ಬೀಜದ ಕೊರತೆಯಾಗಬಾರದು. ಹಾಗೂ ಬಿತ್ತನೆ ಬೀಜಗಳ ಬಗ್ಗೆ ಹೆಚ್ಚು ಪ್ರಚಾರ ನೀಡಿ ಎಂದು ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ಎಷ್ಟು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳು ಇದೆ ಎಂಬುದರ ಬಗ್ಗೆ ರೈತರಿಗೆ ಮಾಧ್ಯಮದ ಮುಖಾಂತರ ತಿಳಿಸಿ. ಇದರಿಂದ ರೈತರಿಗೆ ಅನುಕೂಲಕರವಾಗಲಿದೆ. ಇಲ್ಲದಿದ್ದರೆ ಬಿತ್ತನೆ ಬೀಜ ಸಿಗುತ್ತಿಲ್ಲ ಎಂದು ತಪುö್ಪ ಸುದ್ದಿ ಹೋಗುತ್ತದೆ. ಹೀಗಾಗಿ ಇದರ ಬಗ್ಗೆ ಹೆಚ್ಚು ಪ್ರಚಾರ ನೀಡಿ ಎಂದು ಹೇಳಿದರು.
ರೈತರಿಗೆ ಬಿತ್ತನೆ ಬೀಜಗಳು ಸೂಕ್ತ ಬೆಲೆಯಲ್ಲಿ ನಿಗದಿತ ಸಮಯಕ್ಕೆ ಸಿಗಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೃತಕವಾಗಿ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಹಾಗೂ ಸಾಧ್ಯವಾದರೆ ಅಂತಹ ಅಂಗಡಿಗಳನ್ನು ಜಪ್ತಿ ಮಾಡಿ ಎಂದರು.

ಮೈಸೂರು ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ
ಮೈಸೂರು ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಬಿತ್ತನೆ ಬೀಜಕ್ಕೆ 39798 ಕ್ವಿಂಟಾಲ್ ಬೇಡಿಕೆ ಇದ್ದು, 45275 ಕ್ವಿಂಟಾಲ್ ಲಭ್ಯತೆ ಇದೆ. ರಸಗೊಬ್ಬರ 44,209 ಮೆಟ್ರಿಕ್ ಟನ್ ದಾಸ್ತಾನು ಇತ್ತು. ಈಗಾಗಲೇ 26,459 ಮೆಟ್ರಿಕ್ ಟನ್ ಮಾರಾಟ ಮಾಡಲಾಗಿದೆ. ಇನ್ನೂ 17,749 ಮೆಟ್ರಿಕ್ ಟನ್ ದಾಸ್ತಾನು ಉಳಿದಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಕೆ.ಮಹದೇವ್, ಹರ್ಷವರ್ಧನ್, ಅನೀಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಧರ್ಮಸೇನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss