ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಸಕ್ರಿಯವಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.