ಕರಾವಳಿ ಭಾಗದಲ್ಲಿ ಇನ್ನಷ್ಟು ಚುರುಕುಗೊಳ್ಳಲಿದೆ ಮುಂಗಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕರಾವಳಿ ಭಾಗಗಳಲ್ಲಿ ಮುಂಗಾರು ಇನ್ನಷ್ಟು ಚುರುಕಾಗುವ ಲಕ್ಷಣಗಳು ಕಾಣಿಸಿವೆ. ಜೊತೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆಗಳು ದಟ್ಟವಾಗುತ್ತಿದೆ.

ಜೂ.20ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿ ಭಾಗದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಮಧ್ಯಾಹ್ನದ ಬಳಿಕ, ಸಂಜೆ, ರಾತ್ರಿ ಮಳೆಯಾಗುವ ಸಾಧ್ಯತೆಯಿದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಕೂಡಾ ಉತ್ತಮ ಮಳೆಯ ಮುನ್ಸೂಚನೆ ಇದೆ.

ಇನ್ನು ಧಾರವಾಡ, ಗದಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದ್ದರೆ ಬಾಗಲಕೋಟೆ, ಕೊಪ್ಪಳ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!