August 18, 2026
Tuesday, August 18, 2026
spot_img

WEATHER | ರಾಜ್ಯದಲ್ಲಿ ಕಡಿಮೆಯಾಯ್ತು ಮುಂಗಾರು ಅಬ್ಬರ, ರಾಜ್ಯಾದ್ಯಂತ ಮೋಡ ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂಗಾರು ಅಬ್ಬರ ಕೊಂಚ ಕಡಿಮೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುಮ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಹಾಗೂ ರೈತರು ಗಾಳಿಯ ವೇಗ ಹೆಚ್ಚಿರುವ ಕಾರಣ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !