Thursday, June 30, 2022

Latest Posts

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ರಾಜಾದಾದ್ಯಂತ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಮುಂದುವರಿಯಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 15 ಮತ್ತು 16 ರಂದು ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ. ಈ ವೇಳೆ 20 ಸೆಂ.ಮೀ. ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮುಂದಿನ 72 ಗಂಟೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮುಂದಿನ 48 ಗಂಟೆ ವ್ಯಾಪಕ ಮಳೆಯಾಗಲಿದ್ದು, ಆರೆಂಜ್​ ಅರ್ಲಟ್​ ನೀಡಲಾಗಿದೆ.ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಜೂನ್ 15, 16 ರಂದು ಯೆಲ್ಲೋ ಅರ್ಲಟ್​ ಇರಲಿದೆ.
ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss