ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ವರ್ಷ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲು ಆರಂಭಿಸುತ್ತದೆ. ಅಂದಾಜು ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅನುಕೂಲಕರ ವಾತಾವರಣವನ್ನು ಒದಗಿಸಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.
ಐಎಂಡಿ ಪ್ರಕಾರ, 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಅನುಕೂಲಕರ ಮಳೆಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೂಚಿಸಿದೆ