ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಅಧಿವೇಶನ ಶುಕ್ರವಾರ ಮುಕ್ತಾಯಗೊಂಡಿದ್ದು, ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಈ ಅವಧಿಯಲ್ಲಿ ಚರ್ಚೆಕ್ಕಿಂತ ಹೆಚ್ಚಾಗಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಭಾರಿ ಗದ್ದಲಕ್ಕೆ ಸಾಕ್ಷಿಯಾಯಿತು.ಇದರ ನಡುವೆ ವಿರೋಧ ಪಕ್ಷಗಳು,ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಅವಿಶ್ವಾಸ ನಿರ್ಣಯಕ್ಕೆ ಸೋಲಾಯಿತು.
ಒಟ್ಟು 17 ದಿನಗಳಲ್ಲಿ ನಾವು 44 ತಾಸು 13 ನಿಮಿಷಗಳ ಕಾಲ ಅಧಿವೇಶನ ನಡೆಸಿದ್ದೇವೆ ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ 20 ಮಸೂದೆಗಳನ್ನು ಪರಿಚಯಿಸಲಾಗಿದ್ದು, 22 ಕರಡು ಮಸೂದೆ ಅಂಗೀಕರಿಸಲಾಯಿತು ಎಂದು ಹೇಳಿದರು.
ಈ ಮೊದಲು ರಾಜ್ಯಸಭೆ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.