ಜುಲೈ 20 ರಿಂದ ಮುಂಗಾರು ಅಧಿವೇಶನ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜುಲೈ 20 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ.
ಸರ್ವಪಕ್ಷ ಸಭೆಯಲ್ಲಿ ಮುಂಗಾರು ಅಧಿವೇಶನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಕೇಂದ್ರ ಸರ್ಕಾರ, ಪ್ರತಿಪಕ್ಷಗಳ ಸಹಕಾರ ಕೋರುವ ಸಾಧ್ಯತೆ ಇದೆ. ಈ ಬಾರಿ ಮಣಿಪುರ ಹಿಂಸಾಚಾರ, ದೆಹಲಿ ಸುಗ್ರೀವಾಜ್ಞೆ ಮತ್ತು ಇತರ ಹಲವು ವಿಷಯಗಳ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!