ಇಂದಿನಿಂದ ಮುಂಗಾರು ಅಧಿವೇಶನ, ಆಡಳಿತ-ವಿಪಕ್ಷ ನಾಯಕರ ನಡುವೆ ಗದ್ದಲ ಗ್ಯಾರೆಂಟಿ

ಇಂದಿನಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. 20ಕ್ಕೂ ಅಧಿಕ ದಿನಗಳ ಕಾಲ ಈ ಸದನ ನಡೆಯಲಿದ್ದು ಆಡಳಿತ-ವಿಪಕ್ಷ ನಾಯಕರ ನಡುವೆ ಗದ್ದಲ-ಗಲಾಟೆ ನಡೆಯುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ. ಇದರಲ್ಲಿ ಮುಖ್ಯ ವಿಚಾರ ಏನಂದ್ರೆ ಮಂಗಳವಾರ ಕೇಂದ್ರ ಸರ್ಕಾರ ಬಜೆಟ್​ ಮಂಡನೆ ಮಾಡಲಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರಾಜ್ಯ ವಿಧಾನಸಭೆಯಲ್ಲಿ ಅಧಿವೇಶನ ಶುರುವಾಗಿ ಗದ್ದಲ ಗಲಾಟೆಗಳ ಬೆನ್ನಲ್ಲೇ ಈಗ ಸಂಸತ್ತಿನಲ್ಲಿ ಈ ವಾಗ್ವಾದಗಳು ನಡೆಯಲು ಕ್ಷಣಗಣನೆ ಶುರುವಾಗಿದೆ.

ಇಂದಿನಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಶುರುವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಹಲವು ಅಸ್ತ್ರಗಳನ್ನು ಇಟ್ಟುಕೊಂಡು ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಆದ್ರೆ ಇಂದಿನ ಅಧಿವೇಶನಕ್ಕೂ ಮೊದಲು ನಿನ್ನೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!