ನಾಳೆಯಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ: ಮಣಿಪುರ ಹಿಂಸಾಚಾರ ಚರ್ಚೆಗೆ ಕೇಂದ್ರ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ತಿನಲ್ಲಿ ಮುಂಗಾರು ಅಧಿವೇಶನ (Monsoon session) ನಾಳೆಯಿಂದ ಆರಂಭವಾಗಲಿದ್ದು, ಈ ಹಿನ್ನೆಲೆ ಇಂದು ಸರ್ವಪಕ್ಷ ಸಭೆ ನಡೆಸಲಾಗಿದೆ.

ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಸಭೆ ನಡೆಸಿದರು. ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಯಾಗಬೇಕು ಎಂದು ವಿಕ್ಷಪಗಳು ಒತ್ತಾಯಿಸಿದ್ದುಗ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಈ ಬಗ್ಗೆ ಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಮಣಿಪುರದಲ್ಲಿ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 2 ತಿಂಗಳ ಹಿಂಸಾಚಾರ ಸೇರಿದಂತೆ ಸಂಸತ್ತಿನಲ್ಲಿ ಎಲ್ಲಾ ವಿಷಯಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು.

ಬೆಲೆ ಏರಿಕೆ ಮತ್ತು ಮಣಿಪುರದಂತಹ ವಿಷಯಗಳ ಬಗ್ಗೆ ಚರ್ಚೆ ಮಾಡಲೇಬೇಕು, ಇದರಲ್ಲಿ ಯಾವುದೇ ಸಂಧಾನ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರತಿಕ್ರಿಯೆಯನ್ನು ಕೇಳುತ್ತಿದೆ. ಇದೀಗ ಈ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಒಪ್ಪಿಗೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!