ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮಾನ್ಸೂನ್ ಅಬ್ಬರ ಈಗಾಗಲೇ ಶುರುವಾಗಿದೆ, ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಕಣ್ಣೂರು, ವಯನಾಡ್, ಕೋಝಿಕ್ಕೋಡ್‌ನಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಚ್ಚಿಯ ಕಡಲತೀರದಲ್ಲಿ ಭಾರೀ ಗಾಳಿ ಬೀಸುತ್ತಿರುವುದರಿಂದ ತಿರುವನಂತಪುರಂ, ಕೊಲ್ಲಂ ಮತ್ತು ಆಲಪ್ಪುಳ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂಬೈ 24 ಗಂಟೆಗಳಲ್ಲಿ 135.4 ಮಿಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.