ಹೊಸದಿಗಂತ ವರದಿ ಚಿಕ್ಕಮಗಳೂರು :
ಮಲೆನಾಡಲ್ಲಿ ಮುಂಗಾರಿನ ಅಬ್ಬರ ಮುಂದುವರಿದಿದ್ದು, ಗಾಳಿ ಮಳೆಗೆ ಮನೆಯ ಮೇಲೆ ಮರ ಬಿದ್ದು ಹಾನಿ ಸಂಭವಿಸಿದ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮರ ಬೀಳುತ್ತಿದ್ದಂತೆ ಮನೆಯಲ್ಲಿದ್ದವರು ಹೊರಕ್ಕೆ ಓಡಿ ಬಂದಿದ್ದಾರೆ. ಈ ವೇಳೆ ಟೊಂಗಟಯೊಂದು ತಗುಲಿ ಪ್ರೇಮ ಎಂಬ ಮಹಿಳೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿವೆ. ಸ್ಥಳಕ್ಕೆ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಕಳಸ ತಾಲೂಕಿನ ಕುದುರೆಮುಖ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
ನಿರಂತರ ಮಳೆಯಿಂದ ತುಂಗ-ಭದ್ರಾ, ಹೇಮಾವತಿ ನದಿ ನೀರು ಅಪಯದ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜು ತಿಳಿಸಿದ್ದಾರೆ.