ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ಅಲ್ಲಲ್ಲಿ ಮಳೆ ಚುರುಕಾಗಿದ್ದು, ಸೆ.7 ಹಾಗೂ ಸೆ.8 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದ್ದು, ದಕ್ಷಿಣ ಒಳನಾಡಿದನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆಯಾಗಬಹುದು.
ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?
ಶಿವಮೊಗ್ಗ
ಚಿಕ್ಕಮಗಳೂರು
ಚಾಮರಾಜನಗರ
ಕೊಡಗು
ಬೀದರ್
ಬೆಳಗಾವಿ
ರಾಯಚೂರು
ವಿಜಯಪುರ
ಯಾದಗಿರಿ
ಬಾಗಲಕೋಟೆ
ದಕ್ಷಿಣ ಕನ್ನಡ
ಉತ್ತರ ಕನ್ನಡ