ಕೇರಳಕ್ಕೆ ಜೂನ್ 4 ರಂದು ಮುಂಗಾರು ಪ್ರವೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಂಗಳವಾರ ಮುನ್ಸೂಚನೆ ನೀಡಿದೆ.

ಸಾಮಾನ್ಯವಾಗಿ ಜೂನ್ 1 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸುತ್ತದೆ. ಇದೀಗ ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾನ್ಸೂನ್ ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!