ಮುಂಗಾರು ದುರ್ಬಲ: ಕಾಳಜಿ ಕೇಂದ್ರಗಳಿಂದ‌ ಮನೆಗಳತ್ತ ಮುಖಮಾಡಿದ ಸಂತ್ರಸ್ತರು

ಹೊಸದಿಗಂತ ವರದಿ, ಮಡಿಕೇರಿ:
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಪರಿಣಾಮವಾಗಿ ಕಾಳಜಿ ಕೇಂದ್ರಗಳಲ್ಲಿ‌ ಆಶ್ರಯ ಪಡೆದಿದ್ದ ಸಂತ್ರಸ್ತರು ತಮ್ಮ ಮನೆಗಳತ್ತ ಮುಖಮಾಡುತ್ತಿದ್ದಾರೆ.
ವೀರಾಜಪೇಟೆ ತಾಲೂಕಿನ ತೋರ ಭೂಕುಸಿತ ಪ್ರದೇಶದ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿದ್ದ ಕಾಳಜಿ ಕೇಂದ್ರದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರು ಬುಧವಾರ ಆಹಾರದ‌ ಕಿಟ್’ಗಳನ್ನು ವಿತರಿಸಿದರು.
ಅತಿವೃಷ್ಟಿಯಿಂದ ಸಂತ್ರಸ್ತರಾದವರು ಕಾಳಜಿ ಕೇಂದ್ರದಲ್ಲಿರಲಿ, ಇಲ್ಲವೇ ಅವರ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದಿರಲಿ, ಅವರೆಲ್ಲರಿಗೂ ಆಹಾರದ ಕಿಟ್’ಗಳನ್ನು ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದ್ದರು.
ಅದರಂತೆ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸಿ, ಎಲ್ಲರನ್ನೂ ಮನೆಗೆ ತೆರಳುವ ವ್ಯವಸ್ಥೆ ಮಾಡಿಕೊಡಲಾಯಿತು.
ತಹಶೀಲ್ದಾರ್ ಯೋಗಾನಂದ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!