ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಭಾಗದಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಇತ್ತ ಬೆಂಗಳೂರಿನಲ್ಲಿ ಕೂಡ ಶನಿವಾರದ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ (IMD) ತಿಳಿಸಿದೆ.
ಜೂನ್ 29, ಗುರುವಾರದಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಅತಿ ಹೆಚ್ಚು (115.6 ಮಿಮೀ ನಿಂದ 204.4 ಮಿಮೀ) ಮಳೆಯಾಗುವ ನಿರೀಕ್ಷೆಯಿದೆ.
ಜೂನ್ 28 ರಿಂದ ಜುಲೈ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40-45 ಕಿಮೀ ವೇಗದಲ್ಲಿ ಮತ್ತು ಹೊರಗೆ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.