ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಘೋಷಿಸಿದ್ದು, ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.

ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ.

ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ ಅನುವಾದ ಪ್ರಶಸ್ತಿ ಐವತ್ತು ಸಾವಿರ ರೂ. ಹಾಗೂ ಸನ್ಮಾನಗಳು ಒಳಗೊಂಡಿವೆ.

‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನವು ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿಯನ್ನು ಪ್ರಕಟಿಸಿದೆ.

ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!