ಮೋರ್ಬಿ ಸೇತುವೆ ದುರಂತ: ಆರೋಪಿ ಒರೆವಾ ಕಂಪನಿ ಮುಖ್ಯಸ್ಥ ನ್ಯಾಯಾಲಯಕ್ಕೆ ಶರಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುಜರಾತಿನ ಮೋರ್ಬಿ ಸೇತುವೆ ದುರಂತ ಪ್ರರಕಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಒರೆವಾ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಗುಜರಾತ್ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಜನವರಿ 27 ರಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ ಎಸ್ ಝಲಾ ಅವರು 1,262 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೊರ್ಬಿ ಸೇತುವೆ ಕುಸಿದು 135 ಜನರು ಸಾವನ್ನಪ್ಪಿದ್ದರು.

ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆಗೆ ಸಹಕರಿಸಲಿಲ್ಲ ಎಂದು ಆರೋಪಿಸಿ ಪಟೇಲ್ ಅವರನ್ನು 10ನೇ ಆರೋಪಿಯನ್ನಾಗಿ ತೋರಿಸಲಾಗಿತ್ತು. ಬಂಧನದ ಭೀತಿಯಿಂದ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ಸಲ್ಲಿಸಿದ್ದರು.

ಒರೆವಾ ಗ್ರೂಪ್ ತಮ್ಮ ಲಾಭಕ್ಕಾಗಿ ಅಕಾಲಿಕವಾಗಿ ಸೇತುವೆಯನ್ನು ತೆರೆದಿದ್ದು, ಅಪಘಾತದ ಸಮಯದಲ್ಲಿ 400 ಕ್ಕೂ ಹೆಚ್ಚು ಜನರಿಗೆ ಸೇತುವೆಯ ಮೇಲೆ ಹೋಗಲು ಅವಕಾಶ ಮಾಡಿಕೊಟ್ಟಿತ್ತು ಎಂದು ಚಾರ್ಜ್ ಶೀಟ್ ಆರೋಪಿಸಿದೆ.

ಜೈಸುಖ್ ಪಟೇಲ್ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಎಂ ಜೆ ಖಾನ್ ಅವರ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ ಎಂದು ಪ್ರಕರಣದಲ್ಲಿ ಸಂತ್ರಸ್ತರನ್ನು ಪ್ರತಿನಿಧಿಸುವ ವಕೀಲ ದಿಲೀಪ್ ಅಗೆಚನಿಯಾ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!