ಮೋರ್ಬಿ ಸೇತುವೆ ದುರಂತ : ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಗುಜರಾತ್ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2022ರ ಅಕ್ಟೋಬರ್ 30 ರಂದು ಮೊರ್ಬಿ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದ 135 ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಾಳುಗಳ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಮೊತ್ತವನ್ನು ನೀಡುವಂತೆ ಗುಜರಾತ್ ಹೈಕೋರ್ಟ್ ಇಂದು (ಫೆಬ್ರವರಿ 22) ಒರೆವಾ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಅವರಿಗೆ ಆದೇಶಿಸಿದೆ.

ಮೊರ್ಬಿ ಸೇತುವೆ ಕುಸಿತ ಪ್ರಕರಣದಲ್ಲಿ 35 ಮಕ್ಕಳು ಸೇರಿದಂತೆ 135 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ, ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆಯನ್ನು ಆರಂಭಿಸಿತ್ತು. ಮಂಗಳವಾರ (ಫೆಬ್ರವರಿ 21) ನಡೆದ ವಿಚಾರಣೆಯ ಸಂದರ್ಭದಲ್ಲಿ, ಒರೆವಾ ಸಮೂಹವು ಪ್ರತಿ ಸಂತ್ರಸ್ತರ ಕುಟುಂಬಗಳಿಗೆ ರೂ 3 ಲಕ್ಷ ಪರಿಹಾರ ಮೊತ್ತವನ್ನು ನೀಡಲು ಮುಂದಾಗಿತ್ತು. ಈ ಮೊತ್ತದ ಬಗ್ಗೆ ನ್ಯಾಯಾಲಯ ಅತೃಪ್ತಿ ವ್ಯಕ್ತಪಡಿಸಿದ್ದು, ಬುಧವಾರ ನಿರ್ದೇಶನ ನೀಡುವುದಾಗಿ ತಿಳಿಸಿತ್ತು.

ಅದರ ಅನ್ವಯ ಗುಜರಾತ್‌ ಹೈಕೋರ್ಟ್‌ ಸಂತಸ್ತ್ರರ ಕುಟಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಮಹತ್ವದ ಆದೇಶವನ್ನು ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!